ಮಿಚಾಂಗ್ ಚಂಡಮಾರುತ ಎಫೆಕ್ಟ್: ನಗರದಲ್ಲಿ ಇನ್ನೆರಡು ದಿನ ಚಳಿ ವಾತಾವರಣ
ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಮಿಚಾಂಗ್ ಚಂಡಮಾರುತ ಪರಿಣಾಮ ಬೀರಿದ್ದು, ಇದರ ಎಫೆಕ್ಟ್ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಹೀಗಾಗಿಯೇ ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ.

ಬೆಂಗಳೂರು: ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಮಿಚಾಂಗ್ ಚಂಡಮಾರುತ ಪರಿಣಾಮ ಬೀರಿದ್ದು, ಇದರ ಎಫೆಕ್ಟ್ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಹೀಗಾಗಿಯೇ ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ.
ನಿತ್ಯ ಬೆಳಗ್ಗೆ ಮತ್ತು ಸಂಜೆ ನಂತರ ತೀವ್ರ ಚಳಿ ಬೀಸುತ್ತಿದೆ. ಕೆಲವೆಡೆ ಸೋನೆ ಮಳೆ ಬರುವ ಲಕ್ಷಣಗಳು ಕಂಡು ಬರುತ್ತಿವೆ. ಈ ವಾತಾವರಣ ಮಂಗಳವಾರದವರೆಗೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ.
ಬಂಗಾಳಕೊಲ್ಲಿ-ಅಂಡಮಾನ್ ಸಮುದ್ರ ಭಾಗದಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ವಾತಾವರಣ ಬದಲಾಗಿದೆ, ಡಿಸೆಂಬರ್ 6 ರವರೆಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಎಂದು ತಿಳಿಸಿದ್ದಾರೆ.
ಮೋಡ ಕವಿದ ವಾತಾವರಣದ ಜೊತೆಗೆ ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂಜಾನೆಯ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


