ಪೊಲೀಸ್-ವಕೀಲರ ಸಂಘರ್ಷ: ಮಧ್ಯಸ್ಥಿಕೆ ವಹಿಸುವಂತೆ ಸಿಎಂಗೆ ಬೊಮ್ಮಾಯಿ ಆಗ್ರಹ
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡಿರುವ ಅವರು, ಚಿಕ್ಕಮಗಳೂರಿನಲ್ಲಿ ಪೋಲಿಸರೇ ಪ್ರತಿಭಟನೆ ಮಾಡುತ್ತಿದ್ದು, ವಕೀಲರೂ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಆಗುತ್ತಿರುವುದು ಒಂದು ಆತಂಕಕಾರಿ ಬೆಳವಣಿಗೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆಯ ಮೇಲೆ ಸರ್ಕಾರದ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ ಎಂದು ಹೇಳಿದ್ದಾರೆ.
ಗೃಹ ಇಲಾಖೆಯು ಈ ರೀತಿ ಅಶಿಸ್ತು ತೋರುತ್ತಿರುವುದು ಒಂದು ಗಂಭೀರವಾದ ವಿಚಾರ, ಸರ್ಕಾರ ಈ ಕೂಡಲೇ ಇದನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಉಂಟಾಗುವ ಅರಾಜಕತೆಗೆ ಕಾರಣವಾಗುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಮಧ್ಯ ಪ್ರವೇಶಿಸಿ ಕಾನೂನು ಎಲ್ಲರೂ ಪಾಲಿಸಬೇಕು ಅನ್ನುವ ವಾತಾವರಣ ಮೂಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


