ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಇಂಟರ್‌ಪೋಲ್ ನೆರವು ಪಡೆಯಲು ಪೊಲೀಸರು ಮುಂದು!
ಬೆಂಗಳೂರು ಸುತ್ತಮುತ್ತಲಿನ 48 ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಪೊಲೀಸರು ಸಿಬಿಐನ ಇಂಟರ್‌ಪೋಲ್ ವಿಭಾಗದ ನೆರವು ಪಡೆಯಲು ನಿರ್ಧರಿಸಿದೆ.

ಬೆಂಗಳೂರು: ಬೆಂಗಳೂರು ಸುತ್ತಮುತ್ತಲಿನ 48 ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಪೊಲೀಸರು ಸಿಬಿಐನ ಇಂಟರ್‌ಪೋಲ್ ವಿಭಾಗದ ನೆರವು ಪಡೆಯಲು ನಿರ್ಧರಿಸಿದೆ.
ಬೆದರಿಕೆ ಇಮೇಲ್‌ಗಳನ್ನು ವಿದೇಶದಿಂದ ಕಳುಹಿಸಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ತಾಂತ್ರಿಕ ನೆರವು ಕೋರಿ ಸಿಬಿಐನ ಇಂಟರ್‌ಪೋಲ್ ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.
ಬೆದರಿಕೆ ಮೇಲ್ ಗಳನ್ನು ಕಳುಹಿಸಿದ್ದವರು ಯಾರು, ಎಲ್ಲಿಂದ ಕಳುಹಿಸಿದ್ದಾರೆಂಬುದರ ಪತ್ತೆ ಮಾಡಲು ಪ್ರಯತ್ನಗಳ ನಡೆಸಲಾಗುತ್ತಿದೆ. ಈಗಾಗಲೇ ಇಂಟರ್‌ಪೋಲ್ ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಅವರೊಂದಿಗೆ ಸಂಪರ್ಕದಲ್ಲಿರಲಾಗಿದೆ. ತನಿಖೆ ಕುರಿತು ವಿಸ್ತೃತ ಸಭೆಯನ್ನು ಸೋಮವಾರ ನಡೆಸಲಾಗುವುದು. ಇದೇ ವೇಲೆ ಕಳೆದ ವರ್ಷ ದಾಖಲಾಗಿರುವ ಕೆಲವು ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿದೇಶಗಳಲ್ಲಿಯೂ ಇಂತಹ ಬೆದರಿಕೆ ಪತ್ರಗಳು ಪತ್ತೆಯಾಗಿವೆ. ಆದರೆ, ಇಲ್ಲಿನ ಶಾಲೆಗಳಿಗೆ ಬಂದಿರುವ ಬೆದರಿಕೆ ಇಮೇಲ್, ವಿದೇಶದಲ್ಲಿ ಬಂದಿರುವ ಬೆದರಿಕೆಗಳ ಇಮೇಲ್ ಗಳ ಐಡಿಗಳಲ್ಲಿ ವ್ಯತ್ಯಾಸವಿದೆ. ಆರೋಪಿಗಳು ವಿಪಿಎನ್ ಹಾಗೂ ಪ್ರಾಕ್ಸಿ ಸರ್ವರ್ ಗಳನ್ನು ಬಳಸಿದ್ದು, ಮೂಲ ಪತ್ತೆ ಮಾಡಲು ತಾಂತ್ರಿಕ ಸವಾಲುಗಳು ಎದುರಾಗಿವೆ. ಅಗತ್ಯಬಿದ್ದರೆ ಮೂಲ ಪತ್ತೆಗೆ ವಿದೇಶಗಳನ್ನೂ ಸಂಪರ್ಕಿಸಲಾಗುವುದು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಹೇಳಿದ್ದಾರೆ.
ಡಿಸೆಂಬರ್ 1 ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳು ಬಂದಿದ್ದವು. ಪೊಲೀಸರು ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕಗಳು ಪತ್ತೆಯಾಗಿರಲಿಲ್ಲ. ಆರೋಪಿಗಳು beeble.com ನ ವಿವಿಧ ಇಮೇಲ್ ಐಡಿಗಳಿಂದ ಬೆದರಿಕೆ ರವಾನಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


