ರಾಜ್ಯ

‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು.

‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ  ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು.

ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಡಿ.11 ಮತ್ತು ಡಿ.12 ಇಲ್ಲಿನ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಬಸವಣ್ಣ ದೇವಾಲಯದ ಆವರಣದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ ಎಂದು ಹೇಳಿದರು.

ಇದೇ ವೇಳೆ ಪರಿಷೆ ವೇಳೆ ಸ್ವಚ್ಛತೆ ಉತ್ತೇಜಿಸಲು ಮತ್ತು ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಕಡಿಮೆ ಮಾಡುವಂತೆ ಜನತೆಗೆ ಮನವಿ ಮಾಡಿದರು.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ ನಡೆಸಲು ತೀರ್ಮಾನಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗುತ್ತಿದೆ. ಸ್ವಚ್ಛತೆ ಕಾಪಾಡುತ್ತಾ ಎಲ್ಲಾ ಬಂದ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಎಲ್ಲಾ ರೀತಿಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.