ರಾಜ್ಯ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಆರೋಪಿ ಪ್ರವೀಣ್ ಚೌಗಲೆ ನ್ಯಾಯಾಂಗ ಬಂಧನ ವಿಸ್ತರಣೆ

ನೆಜ್ಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನವನ್ನು ಮಂಗಳವಾರ 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಆರೋಪಿ ಪ್ರವೀಣ್ ಚೌಗಲೆ ನ್ಯಾಯಾಂಗ ಬಂಧನ ವಿಸ್ತರಣೆ
ಉಡುಪಿ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗಲೆ
Published On :

ಉಡುಪಿ: ನೆಜ್ಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನವನ್ನು ಮಂಗಳವಾರ 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚೌಗಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು.
ನ್ಯಾಯಾಲಯ ಆತನ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಿದೆ.

ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರು ಐನಾಜ್, ಆಕೆಯ ಸಹೋದರಿ ಅಫ್ನಾನ್, ಸಹೋದರ ಅಸೀಮ್ ಮತ್ತು ಅವರ ತಾಯಿ ಹಸೀನಾ ಹತ್ಯೆಗೀಡಾಗಿದ್ದರು. ಐನಾಜ್ ಅಜ್ಜಿ ಹಾಜಿನಬ್ಬ ನೆಜ್ಜಾರಿನಲ್ಲಿರುವ ಅವರ ಮನೆಯಲ್ಲಿ ಗಾಯಗೊಂಡಿದ್ದರು. 

ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನವೆಂಬರ್ 14 ರಂದು ಪೊಲೀಸರು ಪ್ರವೀಣ್ ಚೌಗಲೆಯನ್ನು ಬೆಳಗಾವಿಯಲ್ಲಿ ಬಂಧಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.