40 ಪರ್ಸೆಂಟ್ ಕಮಿಷನ್ ಆರೋಪ: ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6...

ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ಭ್ರಷ್ಟಾಚಾರದ ದಾಖಲೆಯನ್ನು ನಿವೃತ್ತ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಸಮಿತಿಗೆ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ ಸೇರಿದಂತೆ 6 ಸಾವಿರ ಪುಟಗಳ ದಾಖಲೆಗಳನ್ನು ಕೆಂಪಣ್ಣ ಅವರು ಇಂದು ಲೋಕೋಪಯೋಗಿ ಇಲಾಖೆ ಕಚೇರಿಗೆ ಸಲ್ಲಿಸಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ನೀರಾವರಿ, ಕೃಷಿ, ಜಲಸಂಪನ್ಮೂಲ, ಆರೋಗ್ಯ ಇಲಾಖೆ ಸೇರಿ ಇತರೆ ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ನೀಡಲಾಗಿದೆ. ಹಿರಿತನ ಆಧಾರದಲ್ಲಿ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಕಮಿಷನ್ ನೀಡಿದವರಿಗೆ ಮಾತ್ರ ಬಾಕಿ ಹಣ ಪಾವತಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.
ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು, ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ, ಹಾಲಿ ಸರ್ಕಾರದ ವಿರುದ್ಧ ದಾಖಲೆಗಳನ್ನು ಸಲ್ಲಿಸಿದ್ದೇನೆ. ಎಲ್ಲಾ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದೇನೆ. ಎಲ್ಲಾ ಜಿಲ್ಲೆಗಳ ಕಾಮಗಾರಿ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.
ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿದಾರರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಾಕಿ ಇರುವ ಬಿಲ್ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರು. ಆದರೆ ಮನವಿಗೆ ಕಿವಿಗೊಡದ ಕಾಂಗ್ರೆಸ್ ಸರ್ಕಾರ ವಿರುದ್ಧ ಗುತ್ತಿಗೆದಾರರು ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


