ರಾಜ್ಯ

ಮಂಗಳೂರು: ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ, 14 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಉಳ್ಳಾಲದ ಪೆರ್ಮನ್ನೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ, 14 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ
ಸಾಂದರ್ಭಿಕ ಚಿತ್ರ
Published On :

ಮಂಗಳೂರು: ಉಳ್ಳಾಲದ ಪೆರ್ಮನ್ನೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತರನ್ನು ಶಿಶಿರ್ ದೇವಾಡಿಗ ಮತ್ತು ಎಲ್ ಶುಶನ್ ಎಂದು ಗುರುತಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಆರೋಪಿಗಳನ್ನು ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿದ್ದ 132 ಗ್ರಾಂ ಮೆಥಾಂಫೆಟಮೈನ್, 250 ಎಲ್‌ಎಸ್‌ಡಿ ಸ್ಟ್ಯಾಂಪ್ ಡ್ರಗ್ ಮತ್ತು 3.70 ಲಕ್ಷ ರೂ. ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 14 ಲಕ್ಷ ರೂ. ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.