ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ
ಕಲಬುರಗಿ ನಗರದಲ್ಲಿ ಗುರುವಾರ ನ್ಯಾಯಾಲಯಕ್ಕೆ ತೆರಳುತ್ತಿದ್ದ ವಕೀಲರೊಬ್ಬರನ್ನು ಹಾಡಹಗಲೇ ದುಷ್ಕರ್ಮಿಗಳಿಬ್ಬರು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ: ಕಲಬುರಗಿ ನಗರದಲ್ಲಿ ಗುರುವಾರ ನ್ಯಾಯಾಲಯಕ್ಕೆ ತೆರಳುತ್ತಿದ್ದ ವಕೀಲರೊಬ್ಬರನ್ನು ಹಾಡಹಗಲೇ ದುಷ್ಕರ್ಮಿಗಳಿಬ್ಬರು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ನಗರದ ಸಾಯಿ ಮಂದಿರ್ ಬಳಿ ಈ ಭೀಕರ ಕೊಲೆ ನಡೆದಿದೆ. ಕೊಲೆಯಾದ ವಕೀಲರನ್ನು ಉದನೂರ ಗ್ರಾಮದ ನಿವಾಸಿ ಜಿಲ್ಲಾ ನ್ಯಾಯಾಲಯದ ವಕೀಲ ಈರಣ್ಣ ಗೌಡ ಪೊಲೀಸ್ ಪಾಟೀಲ್(40) ಎಂದು ಗುರುತಿಸಲಾಗಿದೆ.
ಹಂತಕರು ಮಚ್ಚಿನೊಂದಿಗೆ ವಕೀಲನನ್ನು ಬೆನ್ನಟ್ಟಿ ಬರುತ್ತಿದಾಗ ಅವರಿಂದ ತಪ್ಪಿಸಿಕೊಳ್ಳಲು ವಕೀಲ ಈರಣ್ಣ ಗೌಡ ಪೊಲೀಸ್ ಪಾಟೀಲ್ ಅವರು ಶ್ರೀ ಗಂಗಾ ವಿಹಾರ್ ಅಪಾರ್ಟ್ಮೆಂಟ್ ಒಳಗೆ ಓಡಿದ್ದಾರೆ. ಅಲ್ಲಿ ತನ್ನ ರಕ್ಷಣೆಗಾಗಿ ರಿವಾಲ್ವರ್ ತೆಗೆಯುತ್ತಿದ್ದ ವಕೀಲನ ಮೇಲೆ ಹಂತಕರು ಮಚ್ಚು ಬೀಸಿ ಹಲ್ಲೆ ಮಾಡಿದ್ದಾರೆ. ಆ ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.
ಮಚ್ ಹಿಡಿದು ಅಟ್ಟಾಡಿಸಿಕೊಂಡು ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪೋಲೀಸರ ಪ್ರಕಾರ, ಹಂತಕರು, ವಕೀಲರನ್ನು ಸುಮಾರು ಅರ್ಧ ಕಿಲೋಮೀಟರ್ ವರೆಗೆ ಬೆನ್ನಟ್ಟಿದ ನಂತರ ಅವನರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಳೆ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


