ಯತ್ನಾಳ್ ಮಹಾನ್ ಸುಳ್ಳುಗಾರ, ಕೇವಲ ಆರೋಪ ಮಾಡುವುದಲ್ಲ, ಸಾಬೀತುಪಡಿಸಲಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.
ಈ ಕುರಿತು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹಳ ವರ್ಷಗಳಿಂದ ನನಗೆ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲ ಇವರು ಸುಮ್ಮನಿದ್ದಾರೆ. ಯತ್ನಾಳ್ ಮಹಾನ್ ಸುಳ್ಳುಗಾರ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದರು.
ಯತ್ನಾಳ್ ಗೆ ವಿಪಕ್ಷ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಎಂಬ ಬೇಸರ, ಹತಾಶೆ, ಸಿಟ್ಟಿನಿಂದ ಹೀಗೆಲ್ಲಾ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.
ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ಹಶ್ಮಿಯವರು ಕೂಡ ಯತ್ನಾಳ್ ಆರೋಪ ಸಾಬೀತುಮಾಡಲಿ ಎಂದು ಹೇಳಿದ್ದಾರೆ. ಬರೀ ಆರೋಪ ಮಾಡುವುದಲ್ಲ, ಸಾಬೀತು ಮಾಡಲಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


