ಹಳೆ ಪಿಂಚಣಿ ಯೋಜನೆ ಜಾರಿಗೆ ಹಲವು ಅಡೆತಡೆಗಳಿವೆ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್ತಿಗೆ ಗುರುವಾರ ಹೇಳಿದರು.

ಬೆಳಗಾವಿ: ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್ತಿಗೆ ಗುರುವಾರ ಹೇಳಿದರು.
ಸದಸ್ಯರಾದ ಮರಿತಿಬ್ಬೇಗೌಡ, ಎಸ್.ವಿ.ಸಂಕನೂರ, ಹೇಮಲತಾನಾಯಕ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉತ್ತರಿಸಿದ ಕೃಷ್ಣಬೈರೇಗೌಡ ಅವರು, ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್)ಜಾರಿಗೆ ಬಂದ ಮೇಲೆ ಇದನ್ನು ಮುಂದುವರೆಸಬೇಕೆ? ಇಲ್ಲವೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಮಾಡಬೇಕೇ ಎಂಬುದರ ಬಗ್ಗೆ ವಿಸ್ತೃತ ವರದಿ ನೀಡುವಂತೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಇತ್ತರೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಈಗಾಗಲೇ ಮೂರು ಬಾರಿ ಸಭೆ ನಡೆಸಿದೆ. ಆದಷ್ಟು ಬೇಗ ವರದಿ ನೀಡುವಂತೆ ಸರ್ಕಾರ ಸಮಿತಿಗ ಸೂಚಿಸಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ವರದಿ ನೀಡಲು ಸಂಬಂಧಪಟ್ಟವರಿಗೆ ಸೂಚನೆ ನೀಡುವುದಾಗಿ ಹೇಳಿದರು.
ಎನ್‍ಪಿಎಸ್‍ನಿಂದ ಕೆಲವು ನೌಕರರ ಭವಿಷ್ಯ ನಿಧಿ ಹಣ ಕೇಂದ್ರಕ್ಕೆ ಹೋಗುತ್ತದೆ. ನಾವು ಹಳೇ ಪಿಂಚಣಿ ವ್ಯವಸ್ಥೆ ಮುಂದುವರೆಸಿದರೆ ಈ ಹಣ ಬರುವುದಿಲ್ಲ. ಇದನ್ನು ಹೇಗೆ ಸರಿಪಡಿಸಬೇಕು ಎಂಬುದರ ಬಗ್ಗೆ ಸಮಿತಿ ಕೂಲಂಕುಷವಾಗಿ ಪರಿಶೀಲಿಸಲಿದೆ.
ರಾಜಸ್ಥಾನ ಸರ್ಕಾರ ನಮ್ಮ ನೌಕರರ ಪಿಎಫ್ ಹಣವನ್ನು ಹಿಂದಿರುಗಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದೆ. ಇದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕ್ರಮ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ.
ಕೇಂದ್ರದಲ್ಲಿರುವ ನಮ್ಮ ನೌಕರರ ಹಣವನ್ನು ನಾವೇ ಕಟ್ಟಬೇಕು ಎಂದರೆ ಆರ್ಥಿಕವಾಗಿ ಹೊರೆಯಾಗಲಿದೆ. ಈ ಎಲ್ಲದರ ಬಗ್ಗೆಯೂ ಸಮಿತಿ ಪರಿಶೀಲಿಸಿ ವರದಿ ನೀಡಲಿದೆ. ಅದಾದ ನಂತರ ಸರ್ಕಾರ ವರದಿ ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


