ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ವಿವಾಹ ಬೇಡ ಎಂದ ವಧು: ಮುಂದೇನಾಯ್ತು…?
ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ವಧು ಮದುವೆ ಬೇಡ ಎಂದು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ವಧು ಮದುವೆ ಬೇಡ ಎಂದು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಮಂಜುನಾಥ್ ಮತ್ತು ಐಶ್ವರ್ಯ ನಡುವೆ ವಿವಾಹ ನಿಶ್ಚಿಯವಾಗಿತ್ತು. ಅದರಂತೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಗೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಇನ್ನೇನು ವರ ಕೈಯಲ್ಲಿ ತಾಳಿ ಹಿಡಿದು ಕಟ್ಟಬೇಕು ಎನ್ನುವಷ್ಟರಲ್ಲೇ ವಧು ಕೈ ಅಡ್ಡ ಹಿಡಿದು ಮದುವೆ ಬೇಡ ಎಂದು ತಡೆದಿದ್ದಾಳೆ.
ಈ ವೇಳೆ ಸಂಬಂಧಿಕರು ಐಶ್ವರ್ಯಳನ್ನು ಮನವೊಲಿಸಲು ಪ್ರಯತ್ನಿಸಿದ್ದು, ಎಷ್ಟೇ ಹರಸಾಹಸ ಪಟ್ಟರೂ ಬಗ್ಗದ ಐಶ್ವರ್ಯ ಅವರು, ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ್ದಾರೆ.
ಬಳಿಕ ಯುವತಿ ನಡೆಗೆ ಯುವಕನ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಗ್ವಾದ ಉಂಟಾಗಿ ಕೊನೆಗೆ ಅಂತಿಮವಾಗಿ ಮದುವೆಯೇ ರದ್ದುಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


