ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿ: ಶಾಸಕರು, ಸಚಿವರಿಗೆ ಸ್ಪೀಕರ್ ಖಾದರ್ ಸೂಚನೆ
ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.

ಬೆಳಗಾವಿ: ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.
ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಇತರ ಕೆಲವು ಶಾಸಕರು ವಿಧಾನಸಭೆಯಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರವನ್ನು ತೆಗೆಯಬೇಕು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರು ಮತ್ತು ಸಚಿವರು ಅಧಿವೇಶನಕ್ಕೆ ಸರಿಯಾದ ಸಮಯಕ್ಕೆ ಬರಬೇಕು. ಉತ್ತಮವಾಗಿ ಚರ್ಚೆ ನಡೆಸುವುದು, ಯೋಜನೆ ರೂಪಿಸುವುದು ಅವರ ಕೆಲಸ. ಅವರ ಕೆಲಸವನ್ನು ಅವರು ಚೆನ್ನಾಗಿ ಮಾಡಲಿ. ಯಾರು ಯಾವ ಕೆಲಸ ಮಾಡಬೇಕೋ ಅದೇ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಸುವುದು ಸರಿಯಲ್ಲ, ಶಾಸಕರು, ಸಚಿವರು ವಿವಾದ ಸೃಷ್ಟಿಸುವ ಬದಲು ಜನರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು. ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.
‘ಹಿಂದೆ ಏನು ಆಗಿದೆಯೋ ಅದರ ಬಗ್ಗೆ ವಿಮರ್ಶೆ ಮಾಡುವುದಿಲ್ಲ. ರಾಜ್ಯದಲ್ಲಿ ಸೌಹಾರ್ದ ಮೂಡಿಸುವುದು ನನ್ನ ಕೆಲಸ. ಯಾವುದನ್ನೂ ಕಿತ್ತು ಎಸೆಯುವುದು ನನ್ನ ಕೆಲಸವಲ್ಲ. ಅದರ ಬದಲಿಗೆ ಬೆಸೆಯುವುದು ನನ್ನ ಕೆಲಸ. ಸೌಹಾರ್ದ ಮೂಡಿಸುವುದೇ ನನ್ನ ಆದ್ಯತೆ. ನಾನು ಸಾಂವಿಧಾನಿಕ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


