ರಾಜ್ಯ

ತುಮಕೂರು: ಮೇಣದ ಬತ್ತಿ ಬೆಳಕಿನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಅವಘಡ; 16 ವರ್ಷದ ಬಾಲಕಿ ಸಾವು

ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ತುಮಕೂರು: ಮೇಣದ ಬತ್ತಿ ಬೆಳಕಿನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಅವಘಡ; 16 ವರ್ಷದ ಬಾಲಕಿ ಸಾವು
ಮೃತ ಬಾಲಕಿ ಸೌಂದರ್ಯ
Published On :

ತುಮಕೂರು: ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಕಟ್ಟಿಗೆಹಳ್ಳಿ ಗ್ರಾಮದ ಲಕ್ಷ್ಮಣ ಎಂಬುವರ ಮಗಳು ಸೌಂದರ್ಯ (16) ಮೃತ ದುರ್ದೈವಿ. ಕುಣಿಗಲ್ ತಾಲೂಕಿನ ಮಹಾತ್ಮ ಗಾಂಧಿ ಪಿಯು ಕಾಲೇಜಿನಲ್ಲಿ 10ನೇ ತರಗತಿ ಓದುತ್ತಿದ್ದಳು.

ಯಡಿಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಮೊಂಬತ್ತಿ ಬೆಳಕಿನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್‌ ಬಾಟಲ್‌ ಕೈತಪ್ಪಿ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೌಂದರ್ಯ ಭಾನುವಾರ ಮೃತಪಟ್ಟಿದ್ದಾರೆ.

ಶುಕ್ರವಾರ ರಾತ್ರಿ ಮನೆಯ ಅಂಗಡಿಯಲ್ಲಿ ವಿದ್ಯುತ್ ಇಲ್ಲದಾಗ ಮೊಂಬತ್ತಿ ಹಚ್ಚಿ ಇಡಲಾಗಿತ್ತು. ಎದುರಿನಲ್ಲಿಯೇ ಬೈಕ್‌ಗೆ ಪೆಟ್ರೋಲ್ ಹಾಕುತ್ತಿದ್ದರು, ಈ ವೇಳೆ ಕರೆಂಟ್ ಬಂದಿದೆ,  ಇದರಿಂದ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟ ಕಾರಣ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಅಂಗಡಿ ಸಾಮಗ್ರಿ ಆಹುತಿಯಾಗಿತ್ತು.

ಗಾಯಗೊಂಡಿದ್ದ ಸೌಂದರ್ಯ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.