ರಾಜ್ಯದಲ್ಲಿ ಅಕ್ರಮ ಟವರ್‌ಗಳು: ಟೆಲಿಕಾಂ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಈ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು. ಈ ಮೂಲಕ ರಾಜ್ಯವು 7,000 ಕೋಟಿ ರೂ. ಗಳನ್ನು ಸಂಗ್ರಹಿಸಬಹುದು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಸಿದ್ದರಾಮಯ್ಯ ಅವರು ಈ ನಿರ್ದೇಶನ ನೀಡಿದ್ದಾರೆ.
ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಷನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಟವರ್ ಅಳವಡಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ., ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ., ನಗರ ಪುರಸಭೆ ವ್ಯಾಪ್ತಿಯಲ್ಲಿ 35,000 ರೂ. ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ 8.000 ರೂ. ನೀಡಬೇಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು 8,000 ಟವರ್‌ಗಳು ಇದ್ದು, ರಾಜ್ಯದಾದ್ಯಂತ 48,000 ಇವೆ ಎಂದು ರಮೇಶ್ ತಿಳಿಸಿದ್ದಾರೆ.
ಅವುಗಳಲ್ಲಿ ಹಲವು ಇನ್‌ಸ್ಟಾಲೇಷನ್ ಶುಲ್ಕವನ್ನು ಪಾವತಿಸದೆ ಸ್ಥಾಪಿಸಲಾಗಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ. ಹೀಗಾಗಿ, ಇತರೆ ತೆರಿಗೆಯೊಂದಿಗೆ ಟವರ್ ಇನ್‌ಸ್ಟಾಲೇಷನ್ ಶುಲ್ಕವನ್ನು ಸಹ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಇತರ ರಾಜ್ಯಗಳು ಮೊಬೈಲ್ ಟವರ್‌ಗಳಿಗೆ 2 ಲಕ್ಷ ರೂ.ವರೆಗೆ ಶುಲ್ಕವನ್ನು ಸಂಗ್ರಹಿಸುತ್ತಿದ್ದು, ಕರ್ನಾಟಕ ಕೂಡ ಈ ಶುಲ್ಕವನ್ನು ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


