ಗಾಂಧಿವಾದ ಕಿತ್ತೊಗೆಯಬೇಕು: ನಟ ಚೇತನ್ ಅಹಿಂಸಾ ಹೇಳಿಕೆ
ಗಾಂಧೀಜಿಯವರ ‘ಧಾರ್ಮಿಕ ಸಾಮರಸ್ಯ’ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ಬೆಂಗಳೂರು: ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಗಾಂಧಿವಾದ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಗಾಂಧೀಜಿಯವರ ‘ಧಾರ್ಮಿಕ ಸಾಮರಸ್ಯ’ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ಖಾಸಗಿಯಾಗಿ, ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ. ಸಾರ್ವಜನಿಕವಾಗಿ, ನಾವು ಜಾತ್ಯತೀತ ರಾಷ್ಟ್ರ –ಅಂದರೆ ಧರ್ಮದಿಂದ ದೂರ ಉಳಿಯುವುದಾಗಿದೆ. ‘ಧಾರ್ಮಿಕ ಸಾಮರಸ್ಯ’ ಎಂದರೆ ಅಸಮಾನತೆಯ ಸಂರಕ್ಷಣೆ. ಇದರಿಂದಾಗಿ ಗಾಂಧಿವಾದವನ್ನು ಕಿತ್ತೊಗೆಯಬೇಕು’ ಎಂದು ಚೇತನ್ ಬರದುಕೊಂಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿ.ಡಿ ಸಾವರ್ಕರ್ ಜೊತೆಗೆ ಮಹಾತ್ಮಾ ಗಾಂಧೀಜಿ ಫೋಟೊವನ್ನು ತೆರವು ಮಾಡಬೇಕು ಎಂದು ಈಚೆಗೆ ಚೇತನ್ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


