ಟಿಕೆಟ್ ರಹಿತ ಪ್ರಯಾಣ: 7 ಲಕ್ಷ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಬಿಎಂಟಿಸಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಳೆದ ತಿಂಗಳು ವಿವಿಧ ಉಲ್ಲಂಘನೆಗಳಿಗಾಗಿ 3,767 ಪ್ರಯಾಣಿಕರಿಗೆ ದಂಡ ವಿಧಿಸಿದೆ ಮತ್ತು 7 ಲಕ್ಷ ರೂ.ಗೂ ಹೆಚ್ಚು ದಂಡವನ್ನು ಸಂಗ್ರಹಿಸಿದೆ ಎಂದು ಮಂಗಳವಾರ ತಿಳಿಸಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಳೆದ ತಿಂಗಳು ವಿವಿಧ ಉಲ್ಲಂಘನೆಗಳಿಗಾಗಿ 3,767 ಪ್ರಯಾಣಿಕರಿಗೆ ದಂಡ ವಿಧಿಸಿದೆ ಮತ್ತು 7 ಲಕ್ಷ ರೂ.ಗೂ ಹೆಚ್ಚು ದಂಡವನ್ನು ಸಂಗ್ರಹಿಸಿದೆ ಎಂದು ಮಂಗಳವಾರ ತಿಳಿಸಿದೆ.
ಪ್ರಯಾಣಿಕರ ಟಿಕೆಟ್ ರಹಿತ ಪ್ರಯಾಣವನ್ನು ಪತ್ತೆಹಚ್ಚಲು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಬಸ್‌ಗಳ ತಪಾಸಣೆಯನ್ನು ತನ್ನ ಸಿಬ್ಬಂದಿ ತೀವ್ರಗೊಳಿಸಿದ್ದಾರೆ ಎಂದು ಬಿಟಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.
ನವೆಂಬರ್‌ನಲ್ಲಿ, ಸಿಬ್ಬಂದಿ 16,421 ಟ್ರಿಪ್‌ಗಳನ್ನು ಪರಿಶೀಲಿಸಿದ್ದು, 3,329 ಟಿಕೆಟ್‌ರಹಿತ ಪ್ರಯಾಣಿಕರನ್ನು ಗುರುತಿಸಿದ್ದಾರೆ. ಅವರಿಂದ 6,68,610 ರೂ. ದಂಡ ವಸೂಲಿ ಮಾಡಿದ್ದಾರೆ ಮತ್ತು ಕರ್ತವ್ಯಲೋಪಕ್ಕಾಗಿ ಕಂಡಕ್ಟರ್‌ಗಳ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬಿಎಂಟಿಸಿಯ ತಪಾಸಣಾ ಸಿಬ್ಬಂದಿ ಮಹಿಳಾ ಪ್ರಯಾಣಿಕರಿಗೆ ಮೀಸಲಾದ ಸೀಟುಗಳನ್ನು ಆಕ್ರಮಿಸಿಕೊಂಡ 438 ಪುರುಷ ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಗಳಿಗೆ ಅನುಗುಣವಾಗಿ 43,800 ರೂ. ದಂಡ ಸಂಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


