ರಾಜ್ಯ

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಹೆಸರಿಡಲು ಸರ್ಕಾರ ಚಿಂತನೆ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಎಂಬಿ ಪಾಟೀಲ್ ಬುಧವಾರ ವಿಧಾನಸಭೆಗೆ ತಿಳಿಸಿದರು.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಹೆಸರಿಡಲು ಸರ್ಕಾರ ಚಿಂತನೆ
ಎಂಬಿ ಪಾಟೀಲ್
Published On :

ಬೆಳಗಾವಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಎಂಬಿ ಪಾಟೀಲ್ ಬುಧವಾರ ವಿಧಾನಸಭೆಗೆ ತಿಳಿಸಿದರು.

ವಿಮಾನ ನಿಲ್ದಾಣಗಳ ಮರುನಾಮಕರಣದ ಕುರಿತು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹೇಳಿದರು.

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ ಶಾಸಕ ಎನ್‌ಎಚ್‌ ಕೋನರೆಡ್ಡಿ ಮತ್ತು ಶ್ರೀನಿವಾಸ್ ಮಾನೆ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು’ ಎಂದು ಹಲವು ದಿನಗಳಿಂದ ಬೇಡಿಕೆಯಿದ್ದು, ಸರ್ಕಾರಕ್ಕೆ ವಿವಿಧ ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿದೆ’ ಎಂದರು.

ಯಾವ ನಗರದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದೋ ಆ ನಗರದ ಹೆಸರನ್ನು ಇಡುವುದು ಅಭ್ಯಾಸವಾಗಿದೆ. ಅಂತಹ ಹೆಸರನ್ನು ಬದಲಾಯಿಸುವುದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ರಾಜ್ಯದ ಯಾವುದೇ ವಿಮಾನ ನಿಲ್ದಾಣವನ್ನು ಮರುನಾಮಕರಣ ಮಾಡಲು ಬಯಸಿದರೆ, ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಕುರಿತು ನಿರ್ಣಯವನ್ನು ಮಂಡಿಸಿ ಅಂಗೀಕರಿಸಬೇಕು ಮತ್ತು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಸಚಿವರು ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕೆಂಬ ಬೇಡಿಕೆ ಪರಿಶೀಲನೆಯಲ್ಲಿದ್ದು, ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾವನೆ ಮಂಡಿಸಿ ಮುಂದಿನ ಕ್ರಮಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಅವರು ಹೇಳಿದರು.

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕೂಡ ವಿಮಾನ ನಿಲ್ದಾಣಗಳ ಮರುನಾಮಕರಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.