ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಜನವರಿ 1 ರಿಂದ ಜಾರಿ
ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ...

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದ್ದಾರೆ.
ಈ ಮುಂಚೆ ಡಿಸೆಂಬರ್ 26 ರಿಂದ 'ಯುವ ನಿಧಿ' ನೋಂದಣಿ ಪ್ರಾರಂಭವಾಗಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದ್ದರು.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಯೋಜನೆಯು ಜನವರಿ 1, 2024 ರಿಂದ ಜಾರಿಗೆ ಬರಲಿದೆ ಮತ್ತು ಅರ್ಜಿದಾರರು 'ಸೇವಾ ಸಿಂಧು' ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಈ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ಮತ್ತು ಅದರಲ್ಲಿ 'ಯುವ ನಿಧಿ' ಕೂಡ ಒಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


