ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊಡಗು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ರಾಜೀನಾಮೆಗೆ ಆಗ್ರಹ
ಸಂಸತ್ತಿನಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ ಸಿಂಹ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.

ಕೊಡಗು: ಸಂಸತ್ತಿನಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ ಸಿಂಹ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ವಿರಾಜಪೇಟೆಯಲ್ಲಿ ಸಂಸದರ ಪ್ರತಿಕೃತಿ ದಹನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಭದ್ರತಾ ಲೋಪಕ್ಕೆ ಬಿಜೆಪಿಯೇ ಹೊಣೆ ಎಂದು ಆರೋಪಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಹೆಸರಿನಲ್ಲಿ ಆರೋಪಿಗಳಿಗೆ ಪಾಸ್ ವಿತರಣೆಯಾಗಿದ್ದು, ಘಟನೆಗೆ ಹೊಣೆ ಹೊತ್ತು ಸಂಸದರು ರಾಜೀನಾಮೆ ನೀಡಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ರಂಜಿ ಪೂಣಚ್ಚ ಆಗ್ರಹಿಸಿದ್ದಾರೆ.
22 ವರ್ಷಗಳ ಹಿಂದೆ ಬಿಜೆಪಿ ಕೇಂದ್ರ ಆಡಳಿತದ ಅವಧಿಯಲ್ಲಿ ಸಂಸತ್ತಿನಲ್ಲಿ ಭದ್ರತಾ ಲೋಪ ಸಂಭವಿಸಿತ್ತು ಎಂದು ವಿವರಿಸಿದ ಅವರು, ಈ ಘಟನೆಯು ಬಿಜೆಪಿ ಸರ್ಕಾರದ ಅದಕ್ಷತೆಯನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಸ್ವಜನಪಕ್ಷಪಾತ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಜಿಲ್ಲೆಯಲ್ಲಿ ಪ್ರತಾಪಸಿಂಹ ಅವರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಅವರು ಸ್ವಜನಪಕ್ಷಪಾತದಲ್ಲಿ ತೊಡಗಿದ್ದಾರೆ ಮತ್ತು ಜನರ ನಿಜವಾದ ಹೋರಾಟಗಳನ್ನು ನಿರ್ಲಕ್ಷಿಸಿದ್ದಾರೆ. ಲೋಕಸಭಾ ಸದಸ್ಯರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವರು ಜನರ ಸುರಕ್ಷತೆಯನ್ನು ಹೇಗೆ ಖಾತ್ರಿಪಡಿಸಬಹುದು? ಎಂದು ವಿರಾಜಪೇಟೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಾದಂಡ ಪಿ ತಿಮ್ಮಯ್ಯ ಪ್ರಶ್ನಿಸಿದರು.
ಪ್ರತಿಭಟನಾಕಾರರು ಪ್ರತಾಪ್ ಸಿಂಹ ಅವರ ಪ್ರತಿಕೃತಿ ದಹನ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆಗೆ ಒತ್ತಾಯಿಸಿದರು. “ಭದ್ರತಾ ಉಲ್ಲಂಘನೆಯು ದೇಶದ ಭದ್ರತಾ ವ್ಯವಸ್ಥೆಯ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸದರಿಗೆ ಭದ್ರತೆ ನೀಡಲು ಸಾಧ್ಯವಿಲ್ಲ. ನಾಗರಿಕರ ಸುರಕ್ಷತೆಯನ್ನು ಅವರು ಹೇಗೆ ಖಚಿತಪಡಿಸಿಕೊಳ್ಳಬಹುದು? ಸಂಸದ ಪ್ರತಾಪ್ ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸಿ ನಿಷ್ಕಾಳಜಿಯಿಂದ ಕಿಡಿಗೇಡಿಗಳಿಗೆ ಪಾಸ್ ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು' ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


