ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕೋಡಿಮಠದ ಶ್ರೀಗೆ ಆಹ್ವಾನ
ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಅಯೋಧ್ಯೆಯ ರಾಮಮಂದಿರ...

ಹಾಸನ: ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಅಯೋಧ್ಯೆಯ ರಾಮಮಂದಿರ ಪ್ರಾಧಿಕಾರ ಆಹ್ವಾನ ನೀಡಿದೆ.
ಈ ಸಂಬಂಧ ರಾಮಲಲ್ಲಾ ದೇಗುಲದ ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂಪಾಲ್ ರೈ ಅವರು ಕೋಡಿಮಠ ಶ್ರೀಗೆ ಪತ್ರ ಬರೆದಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಅಯೋಧ್ಯಾ ಪಟ್ಟಣಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ.
ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಶ್ರೀಗಳುನಿರ್ಧರಿಸಿದ್ದಾರೆ ಮತ್ತು 48 ದಿನಗಳ ಕಾಲ ನಡೆಯಲಿರುವ ವಿವಿಧ ಪೂಜೆ ಮತ್ತು ವಿಧಿವಿಧಾನಗಳಲ್ಲಿ ಭಾಗವಹಿಸಲು ಒಂದೆರಡು ದಿನ ಅಯೋಧ್ಯೆಯಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


