ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಮೆಟ್ರೋ ರೈಲು: ಸಂಚಾರ ವ್ಯತ್ಯಯ, ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರು: ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಮೆಟ್ರೋ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಟವನ್ನು ಅನುಭವಿಸಿದರು. ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್‌ವರಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ. ನಾಗಸಂದ್ರದಿಂದ ಯಶವಂತಪುರ ಹಾಗೂ ಯಶವಂತಪುರದಿಂದ ನಾಗಸಂದ್ರದ ಎರಡು ಕಡೆಯಿಂದಲೂ ಮೆಟ್ರೋ ರೈಲು ಸಂಚಾರವಿಲ್ಲ. ಹೀಗಾಗಿ ಮೆಟ್ರೋ ರೈಲಿಗಾಗಿ ಕಾದು ಪ್ರಯಾಣಿಕರು ಸಂಚಾರವಿಲ್ಲದೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 10:18ಕ್ಕೆ ರೈಲು ಹಳಿಯಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಗಂಭೀರ ಸಮಸ್ಯೆ ಏನಿಲ್ಲ ಶೀಘ್ರವೇ ಸೇವೆ ಆರಂಭಿಸುತ್ತೇವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


