ವಿಜಯಪುರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಜನತಾ ಬಸ್; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಅಪಾಯದಿಂದ ಪಾರು!
ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ಖಾಸಗಿ ಬಸ್ ಒಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.
ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ ರಾಷ್ಟ್ರೀಯ ಹೆದ್ದಾರಿ 50ರ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಸಮೀಪ ಸಂಚರಿಸುತ್ತಿದ್ದಾಗ ಏಕಾಏಕಿ ಟೈರ್ ಬ್ಲಾಸ್ಟ್ ಆಗಿ ಅವಘಡ ಸಂಭವಿಸಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಚಾಲಕ ಬಸ್ ಅನ್ನು ನಿಲ್ಲಿಸಿದ್ದಾನೆ. ತಕ್ಷಣವೇ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.
ನೋಡ ನೋಡುತ್ತಿದ್ದಂತೆಯೇ ಕ್ಷಣಮಾತ್ರದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಎಲ್ಲ ಪ್ರಯಾಣಿಕರು ಬಸ್ ನಿಂದ ಇಳಿದಿದ್ದರಿಂದ ನಡೆಯಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡಿದ್ದಾರೆ.
ಪ್ರಯಾಣಿಕರು ಬಸ್ ನಿಂದ ಕೆಳಗಿಳಿಯವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದ್ದರಿಂದ ಲಗೇಜ್ ಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ಎಲ್ಲರ ಲಗೇಜ್ ಗಳು ಬೆಂಕಿಗಾಹುತಿಯಾಗಿವೆ. ಬೆಳೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಲಗೇಜ್ ನಲ್ಲಿ ಇದ್ದವು ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕದಳದ ಸಿಬ್ಬಂದಿ ದೌಡಾಯಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


