ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ನಾಳೆ ಯತೀಂದ್ರಗೆ ಟಿಪ್ಪು ಹೆಸರಿಟ್ಟರೂ ಅಚ್ಚರಿ ಇಲ್ಲ!
ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಟಾಂಗ್ ನೀಡಿದೆ.

ಬೆಂಗಳೂರು: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಟಾಂಗ್ ನೀಡಿದೆ.
ಕಾಂಗ್ರೆಸ್ ಕೆಲ ಶಾಸಕರು ಟಿಪ್ಪು ಜಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ ಸರ್ಕಾರಕ್ಕೆ ಬಿಜೆಪಿ ಟಾಂಗ್ ನೀಡಿದೆ. ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು:
ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ, ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ, ಮೈಸೂರು ವಿವಿಗೆ ಟಿಪ್ಪು ಹೆಸರು
ಟಿಪ್ಪುವಿನ 108 ಅಡಿ ಪ್ರತಿಮೆ, ಟಿಪ್ಪು ಮದ್ಯದ ಬಾಟಲಿ, ಬಿಎಂಟಿಸಿ/ಕೆಎಸ್‌ಆರ್‌ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು ಇಡಲಿದೆ ಕಮ್ಯೂನಲ್ ಕಾಂಗ್ರೆಸ್ ಎಂದು ಬಿಜೆಪಿ ಲೇವಡಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


