ರಾಜ್ಯ

ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಶ್ರೀಮಂತರಾಯ ವಜ್ಜಲ್ ಹೃದಯಾಘಾತದಿಂದ ಸಾವು!

ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ಡಿ ವಜ್ಜಲ್ ಅವರ ಪುತ್ರ ಶ್ರೀಮಂತರಾಯ ವಜ್ಜಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಶ್ರೀಮಂತರಾಯ ವಜ್ಜಲ್ ಹೃದಯಾಘಾತದಿಂದ ಸಾವು!
ಶ್ರೀಮಂತ್ ವಜ್ಜಲ್
Published On :

ರಾಯಚೂರು: ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ಡಿ ವಜ್ಜಲ್ ಅವರ ಪುತ್ರ ಶ್ರೀಮಂತರಾಯ ವಜ್ಜಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಾನಪ್ಪ ಅವರ ದ್ವಿತೀಯ ಪುತ್ರ 33 ವರ್ಷದ ಶ್ರೀಮಂತ್ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಶ್ರೀಮಂತ್ ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಶ್ರೀಮಂತರಾಯ ಮೃತದೇಹವನ್ನು ಲಿಂಗಸುಗೂರಿಗೆ ರವಾನೆ ಮಾಡಲಾಗುತ್ತಿದ್ದು ಇಂದು ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಶಾಸಕರ ಜಮೀನಿನಲ್ಲಿ ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.