ರಾಜ್ಯ

ರಾಮನಗರ: ಬೆಳಗಿನ ಜಾವ ಬೆಳೆಗೆ ನೀರು ಬಿಡಲು ಹೋಗುತ್ತಿದ್ದ ರೈತನ ಮೇಲೆ ಒಂಟಿ ಸಲಗ ದಾಳಿ; ಸ್ಥಳದಲ್ಲೇ ಸಾವು

ಬೆಳಗಿನ ಜಾವ ಬೆಳೆಗೆ ನೀರು ಹರಿಸಲು ಹೋಗುತ್ತಿದ್ದ ರೈತನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ: ಬೆಳಗಿನ ಜಾವ ಬೆಳೆಗೆ ನೀರು ಬಿಡಲು ಹೋಗುತ್ತಿದ್ದ ರೈತನ ಮೇಲೆ ಒಂಟಿ ಸಲಗ ದಾಳಿ; ಸ್ಥಳದಲ್ಲೇ ಸಾವು
ಸಂಗ್ರಹ ಚಿತ್ರ
Published On :

ರಾಮನಗರ: ಬೆಳಗಿನ ಜಾವ ಬೆಳೆಗೆ ನೀರು ಹರಿಸಲು ಹೋಗುತ್ತಿದ್ದ ರೈತನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. 

ಹಾರೋಹಳ್ಳಿ ತಾಲೂಕಿನಿ ಹಳ್ಳಿಕೆರೆದೊಡ್ಡಿಯಲ್ಲಿ ಈ ಘಟನೆ ನಡೆದಿದ್ದು ಮೃತ ರೈತನನ್ನು 64 ವರ್ಷದ ತಿಮ್ಮಯ್ಯ ಎಂದು ಗುರುತಿಸಲಾಗಿದೆ.

ರೈತನ ಮೇಲೆ ದಾಳಿ ಮಾಡಿದ ಕಾಡಾನೆ ತಲೆಯ ಮೇಲೆಯೇ ಕಾಲಿನಿಂದ ತುಳಿದ ಪರಿಣಾಮ ತಲೆ ಬುರೆಡೆ ಒಡೆದುಹೋಗಿ ಸ್ಥಳದಲ್ಲೇ ತಿಮ್ಮಯ್ಯ ಸಾವನ್ನಪ್ಪಿದ್ದಾರೆ. 

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ತಿಮ್ಮಯ್ಯನವರ ಮೃತದೇಹ ಪರಿಶೀಲಿಸಿದರು. ಈ ವೇಳೆ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಪದೇ ಪದೇ ಕಾಡಾನೆಗಳು ದಾಳಿ ಮಾಡುತ್ತಿದ್ದು ಆನೆಗಳನ್ನು ಕಾಡಿಗೆ ಓಡಿಸುವಂತೆ ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.