ಕಾರವಾರ: ನೀರಿನಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು!
ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ.

ಕಾರವಾರ: ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ.
ಮೃತರು ರಾಮನಬೈಲಿನ ನಿವಾಸಿಗಳು ಎಂದು ತಿಳಿದುಬಂದಿದೆ. 44 ವರ್ಷದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್, 22 ವರ್ಷದ ನಬಿಲ್ ನೂರ್ ಅಹ್ಮದ್, 20 ವರ್ಷದ ನಾದಿಯಾ ನೂರ್, 14 ವರ್ಷದ ಉಮರ್ ಸಿದ್ದಿಕ್ ಮತ್ತು 17 ವರ್ಷದ ಮಿಸ್ಬಾ ತಬಸುಮ್ ಮೃತ ದುರ್ದೈವಿಗಳು.
ಭಾನುವಾರ ರಜೆ ಹಿನ್ನೆಲೆಯಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ತೆರಳಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯ ಓರ್ವನ ಮೃತ ದೇಹ ಪತ್ತೆಯಾಗಿದ್ದು ಉಳಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


