ರಾಜ್ಯ

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಸಂಗ್ರಹ ಚಿತ್ರ
Published On :

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಗಹಲ್ಲೆ ನಡೆಸಿದ್ದರು. ಡಿ.10ರ ಮಧ್ಯರಾತ್ರಿ ನಡೆದಿದ್ದ ಈ ಅಮಾನವೀಯ ಘಟನೆಗೆ ರಾಜ್ಯ ಸರ್ಕಾರ ಮಾತ್ರವಲ್ಲದೆ ಇಡೀ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು 11 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಪ್ರತಿಪಕ್ಷ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ಕಿಡಿಕಾರಿದೆ. ಕೇಂದ್ರ ಮಹಿಳಾ ಆಯೋಗ, ಎಸ್ಟಿ ರಾಷ್ಟ್ರೀಯ ನಿಯೋಗ ಹಾಗೂ ಬಿಜೆಪಿ ಸತ್ಯಶೋಧನಾ ಸಮಿತಿ ಕೂಡ ಭಾನುವಾರ ಬೆಳಗಾವಿಗೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದೆ. ಈ ಮಧ್ಯೆ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ಅಧಇಕಾರಿಗಳಿಗೆ ಕಡತಗಳನ್ನು ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ. ಸಿಐಡಿ ಡಿಐಡಿ ಸುನೀಲ್ ಕುಮಾರ್ ಮೀನಾ ಶೀಘ್ರದಲ್ಲೇ ಬೆಳಗಾವಿಗೆ ಭೇಟಿ ನೀಡಲಿದ್ದು, ಈಗಾಗಲೇ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಸಂಪೂರ್ಣ ವಿವರ ಪಡೆದಿದ್ದಾರೆ.

ಬೆಳಗಾವಿಯ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳನ್ನು ಪಟ್ಟಿಮಾಡಿದ್ದಾರೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.