ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ
ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಈ ಸಮಿತಿಯಲ್ಲಿದ್ದಾರೆ.
ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಾಂಶಗಳನ್ನು ಪರಿಶೀಲಿಸಿ ರಾಜ್ಯಾಧ್ಯಕ್ಷರಿಗೆ ಸಮಿತಿ ವರದಿ ನೀಡಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


