ರಾಜ್ಯ

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್‌ಗೆ ಸರ್ಕಾರದ ವರದಿ

ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್‌ಗೆ ಸರ್ಕಾರದ ವರದಿ
ಕರ್ನಾಟಕ ಹೈಕೋರ್ಟ್
Published On :

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಕೈಗಾರಿಕೆಗಳ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಶಿಫ್ಟ್‌ಗಳಲ್ಲಿ ಕಾರ್ಮಿಕರು ಕೆಲಸ ಮಾಡುವುದರಿಂದ ದಟ್ಟಣೆಗೆ ಕಾರಣವಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಹೀಗಾಗಿ ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ಣದೀಕ್ಷಿತ್‌ರಿದ್ದ ಪೀಠದ ಮುಂದೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದ್ದು ಜನವರಿ ಮೊದಲ ವಾರಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. 

ಸಮರ್ಪಣ ಸಾಂಸ್ಕೃತಿಕ ಸೇವಾ ಸಂಸ್ಥೆ ಪಿಐಎಲ್ ಸಲ್ಲಿಸಿತ್ತು. ಇನ್ನು ಸಮಯ ಬದಲಾವಣೆಗೆ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಪೋಷಕರಿಂದಲೂ ವಿರೋಧ ವ್ಯಕ್ತವಾಗಿತ್ತು. ಪರ್ಯಾಯ ಮಾರ್ಗದ ಕುರಿತು ಕೆಲ ಖಾಸಗಿ ಸಂಘಟನೆ ಸಲಹೆ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.