ರಾಜ್ಯ

ಹಾಸನ: ಕಾಡು ಹಂದಿ ದಾಳಿಯಿಂದ ರೈತ ಸಾವು, ಇಬ್ಬರು ಮಹಿಳೆಯರಿಗೆ ಗಾಯ, ಗುಂಡಿಟ್ಟು ಕೊಂದ ಅರಣ್ಯಾಧಿಕಾರಿಗಳು

ಕಾಡು ಹಂದಿಯೊಂದು ದಾಳಿ ನಡೆಸಿದ್ದರಿಂದ 65 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಇತರ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಳಿಕ ಕಾಡು ಹಂದಿಗೆ ಗುಂಡಿಕ್ಕಿ ಹತ್ಯೆ ಮಾಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಹಾಸನ: ಕಾಡು ಹಂದಿ ದಾಳಿಯಿಂದ ರೈತ ಸಾವು, ಇಬ್ಬರು ಮಹಿಳೆಯರಿಗೆ ಗಾಯ, ಗುಂಡಿಟ್ಟು ಕೊಂದ ಅರಣ್ಯಾಧಿಕಾರಿಗಳು
ಗುಂಡೇಟಿಗೆ ಬಲಿಯಾದ ಕಾಡುಹಂದಿ
Published On :

ಹಾಸನ: ಕಾಡು ಹಂದಿಯೊಂದು ದಾಳಿ ನಡೆಸಿದ್ದರಿಂದ 65 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಇತರ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಳಿಕ ಕಾಡು ಹಂದಿಗೆ ಗುಂಡಿಕ್ಕಿ ಹತ್ಯೆ ಮಾಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ರಾಜೇಗೌಡ ಹಾಗೂ ಅವರ ಪತ್ನಿ ಹೊಲದಲ್ಲಿ ಇತರ ಇಬ್ಬರು ಮಹಿಳೆಯರೊಂದಿಗೆ ಕೆಲಸ ಮಾಡುತ್ತಿದ್ದಾಗ ಹಠಾತ್ ಕಾಡು ಹಂದಿ ದಾಳಿ ನಡೆಸಿದಾಗ ತೀವ್ರವಾಗಿ ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರನ್ನು ರಕ್ಷಿಸಲು ಪ್ರಯತ್ನಿಸಿ ತೀವ್ರವಾಗಿ ಗಾಯಗೊಂಡ ಅವರ ಪತ್ನಿ ಶಾಂತಮ್ಮ ಹಾಗೂ ಮಹಿಳೆ ನಂಜಮ್ಮ ಅವರನ್ನು ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಗೆ ನಂತರ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಹಂದಿ ಇತರರ ಮೇಲೆ ದಾಳಿ ಮಾಡದಂತೆ ನಿಯಂತ್ರಿಸಲು ಸ್ಥಳೀಯರು ದೊಣ್ಣೆಯಿಂದ ಹೊಡೆದಿದ್ದಾರೆ. ಆದರೂ  ಪ್ರಯೋಜನವಾಗಲಿಲ್ಲ. ಇತರ ಮೇಲೂ  ದಾಳಿ ನಡೆಸುತಿತ್ತು. ಇದರಿಂದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಂದೂಕಿನಿಂದ ಕಾಡು ಹಂದಿಯನ್ನು ಹೊಡೆದುರುಳಿಸಿದರು ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.