ಚಿಕ್ಕಬಳ್ಳಾಪುರ: ಓಡಿಹೋಗಿ ಮದುವೆಯಾದ ಪ್ರೇಮಿಗಳು; ಹುಡುಗನ ಮನೆಗೆ ನುಗ್ಗಿ ಹಲ್ಲೆ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಹುಡುಗನ ಪೋಷಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಹಲ್ಲೆ ನಡೆಸಿದ ಹುಡುಗಿಯ ತಂದೆ ಮತ್ತು ಆತನ ಮೂವರು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರೇಮಿಗಳು ಮನೆಯಿಂದ ಓಡಿಹೋಗಿ ಭಾನುವಾರ ದೇವಸ್ಥಾನದಲ್ಲಿ ಮದುವೆಯಾಗಿದ್ದರು.
ಮರುದಿನ ಬಾಲಕಿಯ ಮನೆಯವರಿಗೆ ವಿಷಯ ತಿಳಿದಾಗ ಅವರು ಹುಡುಗನ ಮನೆಗೆ ತೆರಳಿ ಗಲಾಟೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಹುಡುಗನ ಮನೆಯವರ ಮೇಲೆ ಹುಡುಗಿ ಕಡೆಯವರು ಹಲ್ಲೆ ನಡೆಸಿದ್ದಾರೆ.
ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮ್ಮ ಮೇಲೆ ಐದಕ್ಕೂ ಹೆಚ್ಚು ಮಂದಿ ರಾಡ್ ಮತ್ತು ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹುಡುಗನ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 148, 149, 323 ಹಾಗೂ 324 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


