ಮಾರತ್ತಹಳ್ಳಿಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ 3 ಅಂತಸ್ತಿನ ಕಟ್ಟಡ, ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ
ನಗರದ ಮಾರತಹಳ್ಳಿ ಬ್ರಿಡ್ಜ್ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿವೆ.

ಬೆಂಗಳೂರು: ನಗರದ ಮಾರತಹಳ್ಳಿ ಬ್ರಿಡ್ಜ್ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿವೆ.
ಸೋಮವಾರ ರಾತ್ರಿ 11.45ರ ಸುಮಾರಿಗೆ ಅಗ್ನಿ ಅವಘಡದಲ್ಲಿ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ರೋಚಕವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿಯ ಕೆನ್ನಲಾಗೆ ಅಕ್ಕಪಕ್ಕದ ಅಂಗಡಿಗಳು, ಎಲೆಕ್ಟ್ರಿಕ್ ಟ್ರ್ಯಾನ್ಸ್ ಫಾರ್ಮರ್, ತೆಂಗಿನ ಮರಕ್ಕೂ ವ್ಯಾಪಿಸಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿಗಳು, ಬೆಂಕಿ ನಂದಿಸಿದರು. ಈ ವೇಳೆ ಅಗ್ನಿ ಶಾಮಕ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಮಾರತ್ತಙಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


