ಕ್ರಿಸ್ಮಸ್ ರಜೆ: ಕೆಎಸ್‌ಆರ್‌ಟಿಸಿಯಿಂದ 1000 ಹೆಚ್ಚುವರಿಯಾಗಿ 1000 ಬಸ್‌ಗಳ ವ್ಯವಸ್ಥೆ
ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ, ಹೊರ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,000 ವಿಶೇಷ ಬಸ್‌ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಓಡಿಸಲಿದೆ.

ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ, ಹೊರ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,000 ವಿಶೇಷ ಬಸ್‌ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಓಡಿಸಲಿದೆ. ಅಲ್ಲದೆ, ರಾಜ್ಯದ ಪ್ರಮುಖ ಸ್ಥಳಗಳ ನಡುವೆಯೂ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಡಿಸೆಂಬರ್ 22 , 23 ಹಾಗೂ 24 ಬೆಂಗಳೂರಿನಿಂದ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಸದ್ಯ ಲಭ್ಯವಿರುವ ಬಸ್‌ಗಳ ಓಡಾಟದ ಜೊತೆಗೆ ಹೆಚ್ಚುವರಿಯಾಗಿ 1,000 ವಿಶೇಷ ಬಸ್‌ಗಳು ಓಡಲಿದೆ.
ಕ್ರಿಸ್‌ಮಸ್ ರಜೆ ಮುಗಿದ ಬಳಿಕ ಬೇರೆ ಬೇರೆ ಸ್ಥಳಗಳಿಂದ ಮತ್ತೆ ಬೆಂಗಳೂರಿಗೆ ವಾಪಸ್ ಆಗುವವರಿಗೆ ಡಿಸೆಂಬರ್ 25 ರಂದು ವಿವಿಧ ರಾಜ್ಯದ ವಿವಿಧ ಸ್ಥಳಗಳಿಂದ ಹಾಗೂ ಹೊರ ರಾಜ್ಯಗಳಿಂದ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ಎಲ್ಲಾ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಬೆಂಗಳೂರಿನ ಯಾವ ನಿಲ್ದಾಣಗಳಿಂದ ಎಲ್ಲಿಗೆ ಬಸ್?: ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ: ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚಾರ ಮಾಡಲಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೊರಡಲಿದೆ.
ಶಾಂತಿನಗರ ಬಸ್ ನಿಲ್ದಾಣ: ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೆ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿದೆ.
ಶೇ 10 ರಷ್ಟು ರಿಯಾಯಿತಿ: ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್ ನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


