ಒಂದೇ ದಿನದಲ್ಲಿ 50 ಪ್ರಕರಣಗಳ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ!
ಕರ್ನಾಟಕದ ಹೈಕೋರ್ಟ್ ನ ನ್ಯಾಯಾಧೀಶರೊಬ್ಬರು ಒಂದೇ ದಿನ 50 ಪ್ರಕರಣಗಳ ತೀರ್ಪು ಪ್ರಕಟಿಸಿದ್ದಾರೆ.

ಬೆಂಗಳೂರು: ಕರ್ನಾಟಕದ ಹೈಕೋರ್ಟ್ ನ ನ್ಯಾಯಾಧೀಶರೊಬ್ಬರು ಒಂದೇ ದಿನ 50 ಪ್ರಕರಣಗಳ ತೀರ್ಪು ಪ್ರಕಟಿಸಿದ್ದಾರೆ.
ಒಂದೇ ದಿನದಲ್ಲಿ ನೀಡಲಾಗಿರುವ ಗರಿಷ್ಠ ಪ್ರಕರಣಗಳ ತೀರ್ಪು ಇದಾಗಿದೆ. ನ್ಯಾ. ಎಂ ನಾಗಪ್ರಸನ್ನ ಅವರು ಒಂದೇ ದಿನದ್ಲಲಿ 50 ಪ್ರಕರಣಗಳ ತೀರ್ಪು ನೀಡಿರುವ ನ್ಯಾಯಾಧೀಶರಾಗಿದ್ದಾರೆ.
ಈ 50 ಪ್ರಕರಣಗಳ ಪೈಕಿ ಪ್ರಧಾನ ಪೀಠದಲ್ಲಿ ವಿಚಾರಣೆಗೆ ಬಂದಿದ್ದ ಹಾಗೂ ತೀರ್ಪು ಕಾಯ್ದಿರಿಸಿದ್ದ ಪ್ರಕರಣಗಳ 25 ತೀರ್ಪುಗಳಿದ್ದರೆ, ಧಾರವಾಢ ಪೀಠದ 25 ಪ್ರಕರಣಗಳ ತೀರ್ಪಿವೆ.
ಧಾರವಾಡ ಪೀಠದ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪ್ರತಿನಿಧಿಸುತ್ತಿದ್ದ ವಕೀಲರು ವೀಡಿಯೋ ಕಾನ್ಫರೆನ್ಸ್ ಮೂಲಕ ಕಲಾಪಕ್ಕೆ ಹಾಜರಿದ್ದರು. ಬಿಜೆಪಿಯ ಮಾಜಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಗಳ ತೀರ್ಪು ಸೇರಿದಂತೆ 50 ತೀರ್ಪುಗಳು ಪ್ರಕಟವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


