ಬೆಂಗಳೂರು: ಮನೆ-ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದ ತುಷಾರ್ ಗಿರಿನಾಥ್
ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ನಗರದ ವಿವಿಧೆಡೆ ಗುರುವಾರ ಸಂಚಾರ ನಡೆಸಿದರು.

ಬೆಂಗಳೂರು: ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ನಗರದ ವಿವಿಧೆಡೆ ಗುರುವಾರ ಸಂಚಾರ ನಡೆಸಿದರು.
ನ.27ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಡಿ.9ರವರೆಗೆ ಆಕ್ಷೇಪಣೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು. ಇದಾದ ನಂತರ ಬಿಎಲ್‌ಓ ಮತ್ತು ಮೇಲ್ವಿಚಾರಕರು ಮತದಾರರ ಪಟ್ಟಿ ಪರಿಷ್ಕರಿಸುವ ಕಾರ್ಯ ಮಾಡಿದ್ದಾರೆ.
ಕೆಲ ಮನೆಗಳಿಗೆ ಭೇಟಿ ನೀಡಿದ ತುಷಾರ್ ಗಿರಿನಾಥ್ ಅವರು ಪರಿಷ್ಕರಿಸಿರುವ ಪಟ್ಟಿಯನ್ನು ‘ಸೂಪರ್ ಚೆಕ್ಕಿಂಗ್’ ಮಾಡಿದರು.
ಶಾಂತಿನಗರ ಹಾಗೂ ಶಿವಾಜಿನಗರದ ವಿಧಾನಸಭೆ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ನೀಡಲು ತುಷಾರ್ ಗಿರಿನಾಥ್ ಸೂಚಿಸಿದರು.
ಶಾಂತಿನಗರ ಹಾಗೂ ಶಿವಾಜಿನಗರದ ವಿಧಾನಸಭೆ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ನೀಡಲು ತುಷಾರ್ ಗಿರಿನಾಥ್ ಸೂಚಿಸಿದರು.
‘ಸೂಪರ್ ಚೆಕ್ಕಿಂಗ್ ಮಾಡಿ ಎಲ್ಲವೂ ಸರಿಯಿದ್ದು, ನಮೂನೆಗಳಿಗೆ ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜೊತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಯ ಜೊತೆ ಮಾತನಾಡಿ, ಒಂದು ಕಡೆ ಹೆಸರನ್ನು ತೆಗೆಸಬೇಕು’ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ವಿಶೇಷ ಆಯುಕ್ತ (ಚುನಾವಣೆ) ಆರ್ ರಾಮಚಂದ್ರನ್, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಉತ್ತರ) ಸ್ನೇಹಲ್ ಆರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


