ರಾಜ್ಯ

ಬೆಂಗಳೂರಿನಲ್ಲಿ 68 ಸೇರಿ ರಾಜ್ಯದಲ್ಲಿ ಇಂದು 78 ಜನರಿಗೆ ಕೊರೋನಾ ಪಾಸಿಟಿವ್; ಓರ್ವ ಸಾವು

ರಾಜಧಾನಿ ಬೆಂಗಳೂರಿನಲ್ಲಿ 68 ಮಂದಿ ಸೇರಿದಂತೆ ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ 68 ಸೇರಿ ರಾಜ್ಯದಲ್ಲಿ ಇಂದು 78 ಜನರಿಗೆ ಕೊರೋನಾ ಪಾಸಿಟಿವ್; ಓರ್ವ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 68 ಮಂದಿ ಸೇರಿದಂತೆ ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 78 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,252ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಂದು ಆಸ್ಪತ್ರೆಯಿಂದ 7 ಮಂದಿ ಡಿಸ್ಜಾರ್ಜ್​ ಆಗಿದ್ದು, 175 ಪ್ರಕರಣಗಳಲ್ಲಿ 162 ಜನ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ ಮತ್ತು 13 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ 13 ಮಂದಿಯಲ್ಲಿ 8 ಮಂದಿ ಐಸಿಯುನಲ್ಲಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿಯೇ ಇಂದು 68 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ 156 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.