ರಾಜ್ಯ

ಬೆಂಗಳೂರು: ಮನೆ ಮುಂದೆ ಆಟವಾಡುವಾಗ ನೀರಿನ ಸಂಪ್‌ಗೆ ಬಿದ್ದು ಮಗು ಸಾವು!

ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಮನೆ ಮುಂದೆ ಆಟವಾಡುವಾಗ ನೀರಿನ ಸಂಪ್‌ಗೆ ಬಿದ್ದು ಮಗು ಸಾವು!
ಮೃತ ಮಗು ಸಾಯಿದಾ
Published On :

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಮೃತ ಮಗು. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮನೆ ಎದುರು ಆಟವಾಡುವಾಗ ಬಾಗಿಲು ತೆರೆದಿದ್ದ ಸಂಪ್‌ಗೆ ಬಿದ್ದು ನೀರಿನಲ್ಲಿ ಮುಳುಗಿ ಅಸ್ವಸ್ಥವಾಗಿತ್ತು. ಕೂಡಲೇ ಮಗುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಿಸದೆ ತಡರಾತ್ರಿ ಮಗು ಮೃತಪಟ್ಟಿದೆ ಎಂದು ಪೊಲೀಸರು ಹೇಳಿದರು.

ಚಿತ್ರದುರ್ಗ ಮೂಲದ ಸೈಯದ್‌ ಹುಸೇನ್‌ ದಂಪತಿಗೆ ನಾಲ್ವರು ಮಕ್ಕಳು. ಈ ಪೈಕಿ ಮೃತ ಸಾಯಿದಾ ನಾಲ್ಕನೇ ಮಗು. ಗಾರೆ ಕೆಲಸ ಮಾಡುವ ಸೈಯದ್‌ ಕೆಲ ವರ್ಷಗಳಿಂದ ಕುಟುಂಬದ ಜತೆ ಬಾಗಲಗುಂಟೆಯಲ್ಲಿ ವಾಸವಾಗಿದ್ದಾರೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕುಟುಂಬದ ಸದಸ್ಯರು ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಮಗು ಸಾಯಿದಾ ಆಟವಾಡಲು ಮನೆಯಿಂದ ಹೊರಗೆ ಬಂದಿದ್ದಾಳೆ. ಈ ವೇಳೆ ಮನೆ ಎದುರಿನ ಸಂಪ್‌ ಬಾಗಿಲು ತೆರೆದಿದ್ದು, ಸಾಯಿದಾ ಅದರೊಳಗೆ ಬಿದ್ದು ನೀರಿನಲ್ಲಿ ಮುಳುಗಿದ್ದಾಳೆ.

ಇದೇ ಸಮಯಕ್ಕೆ ಆಕೆಯ ತಾತ ಮನೆಯಿಂದ ಹೊರಗೆ ಬಂದಿದ್ದು. ಸಾಯಿದಾಗಾಗಿ ಹುಡುಕಾಡಿದ್ದಾರೆ. ಎಲ್ಲೂ ಪತ್ತೆಯಾಗಿಲ್ಲ. ಬಳಿಕ ಸಂಪ್‌ ಬಳಿ ಬಂದು ನೋಡಿದಾಗ ಸಾಯಿದಾ ನೀರಿನಲ್ಲಿ ಬಿದ್ದು ಒದ್ದಾಡುತ್ತಿದ್ದಳು. ಕೂಡಲೇ ಆಕೆಯನ್ನು ಮೇಲಕ್ಕೆ ಎತ್ತಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫ‌ಲಿಸದೆ ಸಾಯಿದಾ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.