ಸೇವೆ ಕಾಯಂಗೊಳಿಸುವಂತೆ ಒತ್ತಾಯ; ರಕ್ತದಲ್ಲಿ ಸರ್ಕಾರಕ್ಕೆ ಪತ್ರ ಬರೆದ ಕೊಪ್ಪಳದ ಅತಿಥಿ ಉಪನ್ಯಾಸಕರು
ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಕೊಪ್ಪಳದಲ್ಲಿ ಅತಿಥಿ ಉಪನ್ಯಾಸಕರು ತಮ್ಮ ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರು ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಕಳೆದ ಐದು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ.

ಕೊಪ್ಪಳ: ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಕೊಪ್ಪಳದಲ್ಲಿ ಅತಿಥಿ ಉಪನ್ಯಾಸಕರು ತಮ್ಮ ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರು ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಕಳೆದ ಐದು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಸಂಕಷ್ಟದ ಕುರಿತು ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಪ್ರತಿಭಟನೆಯ ಸಂಕೇತವಾಗಿ ಅವರು ತಮ್ಮ ರಕ್ತದಲ್ಲಿ ಪತ್ರಗಳನ್ನು ಬರೆದಿದ್ದಾರೆ.
ಪತ್ರವನ್ನು ಬರೆಯಲು ಅತಿಥಿ ಉಪನ್ಯಾಸಕರು ತಮ್ಮ ರಕ್ತವನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ತೆಗೆದುಕೊಂಡಿದ್ದಾರೆ.
ಉಪನ್ಯಾಸಕರಾದ ವಿಜಯಕುಮಾರ ಕುಲಕರ್ಣಿ, ಲತಾ, ಡಾ. ವೀರಣ್ಣ ಸಜ್ಜನರ್ ಮತ್ತು ಬಸವರಾಜ ಕರುಗಲ್ ಅವರು ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಇನ್ನು ಕೆಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
'ನಾವು ನಮ್ಮ ಸೇವೆಗಳನ್ನು ಕಾಯಂಗೊಳಿಸುವುದಕ್ಕಾಗಿ ಕಾಯುತ್ತಿದ್ದೇವೆ ಮತ್ತು ಸರ್ಕಾರವು ನಮ್ಮ ಕೆಲಸದ ಅವಧಿಯನ್ನು 10 ರಿಂದ 12 ತಿಂಗಳಿಗೆ ಹೆಚ್ಚಿಸಿದೆ. ಆದರೆ, ನಮಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ ಅಥವಾ ಇತ್ತೀಚಿನ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರವು ಸಮಸ್ಯೆಯ ಕುರಿತು ಚರ್ಚಿಸಿಲ್ಲ. ವಿರೋಧ ಪಕ್ಷದವರೂ ಸುಮ್ಮನಿದ್ದಾರೆ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ನಮ್ಮ ರಕ್ತದಲ್ಲಿ ಪತ್ರ ಬರೆದಿದ್ದೇವೆ’ ಎಂದು ಉಪನ್ಯಾಸಕರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


