ಹಣ ಉಳಿತಾಯ ಮಾಡಲು ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ- ಯತ್ನಾಳ್ ಕಿಡಿ
ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ್ದು ಇನ್ನೂ ಮಾಸದೆ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಇಂತಹುದೇ ಘಟನೆ ವರದಿಯಾಗಿದೆ.

ಬೆಂಗಳೂರು: ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ್ದು ಇನ್ನೂ ಮಾಸದೆ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಇಂತಹುದೇ ಘಟನೆ ವರದಿಯಾಗಿದೆ.
ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದಲೇ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ಇದರ ವಿರುದ್ಧ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿ ಹಂಚಿಕೊಂಡಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮುಗ್ಧ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹಣವನ್ನು ಉಳಿತಾಯ ಮಾಡುವುದಕ್ಕೆ ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ ಎಂದು ಟೀಕಿಸಿದ್ದಾರೆ.
ಸ್ವಚ್ಛ ಮಾಡುವ ಕೆಲಸದಿಂದ ಹಿಡಿದು ಬಿಸಿಯೂಟದವರೆಗೂ ಸ್ಪಷ್ಟವಾದ ಪ್ರಮಾಣಿತ ಕಾರ್ಯಾಚರಣಾ ವಿಧಾನ ಇರಬೇಕು. ಹಾಗೂ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕಾದದ್ದು ಶಾಲೆ ಹಾಗೂ ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


