ನೌಕರಿ ಖಾಯಂಗೆ ಆಗ್ರಹ: ಡಿಕೆಶಿ ಭರವಸೆ ಬೆನ್ನಲ್ಲೇ ಪ್ರತಿಭಟನೆ ಕೈಬಿಟ್ಟ ಪೌರ ಕಾರ್ಮಿಕರು
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪೌರಕಾರ್ಮಿಕರು ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪೌರಕಾರ್ಮಿಕರು ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ.
ಕರ್ನಾಟಕ ರಾಜ್ಯ ನಗರ ಮತ್ತು ನಗರಸಭೆ ಪೌರಕಾರ್ಮಿಕರ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾಜು ಮಾತನಾಡಿ, ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಹಾಗೂ ಗುತ್ತಿಗೆದಾರರಿಂದ ಶೋಷಣೆಗೆ ಒಳಗಾಗಿರುವ 13,150 ಪೌರಕಾರ್ಮಿಕರ ನೌಕರರನ್ನು ಖಾಯಂಗೊಳಿಸಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಒತ್ತಡ ಹೇರಲು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 3 ತಿಂಗಳಲ್ಲಿ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು ಎಂದು ಹೇಳಿದ್ದಾರೆ.
ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಬ್ಯುಸಿಯಾಗಿದ್ದು, ಹಣಕಾಸು ಸಮಸ್ಯೆಯನ್ನು ಎದುರಿಸುತ್ತಿದೆ. ಶೀಘ್ರದಲ್ಲೇ ಪೌರಕಾರ್ಮಿಕರ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.
ಪ್ರತಿಭಟನಾ ನಿರತ ಪೌರಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನಗರವನ್ನು ಸ್ವಚ್ಛವಾಗಿಡಲು ನೀವು ಶ್ರಮಿಸುತ್ತಿದ್ದೀರಿ. ನೀವು ಮಾಡುತ್ತಿರುವ ಕೆಲಸವನ್ನು ನಾನು ಗೌರವಿಸುತ್ತೇನೆ. ನಿಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಬೇಡಿಕೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಮುಷ್ಕರವನ್ನು ನಿಲ್ಲಿಸಿ ಕೆಲಸಕ್ಕೆ ಹಿಂತಿರುಗಿ ಎಂದು ಮನವಿ ಮಾಡಿದರು.
ನಿಮ್ಮ ಬದ್ಧತೆಗಾಗಿ ನೀವು ಹೋರಾಡುತ್ತಿದ್ದೀರಿ. ಇದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹಿಂದಿನ ಚುನಾವಣೆಯಲ್ಲಿ ನೀವೆಲ್ಲರೂ ನಮ್ಮ ಪಕ್ಷವನ್ನು ಆಶೀರ್ವದಿಸಿದ್ದೀರಿ ಮತ್ತು ನಿಮ್ಮ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುತ್ತೇವೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


