ರಾಜ್ಯ

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಪ್ರಕರಣ: ಮುಖ್ಯ ಶಿಕ್ಷಕಿ ಬಂಧನ

ಅಂದ್ರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಪ್ರಕರಣ: ಮುಖ್ಯ ಶಿಕ್ಷಕಿ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಅಂದ್ರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಅಂದ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಬಂಧಿತರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ಆರೋಪಿ ಲಕ್ಷಿ ದೇವಮ್ಮ ಅವರನ್ನು ಅಮಾನತುಗೊಳಿಸಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದಲೇ ಶಿಕ್ಷಕರು ಶಾಲೆಯ ಶೌಚಾಲಯವನ್ನು ಬ್ಲೀಚಿಂಗ್ ಪೌಡರ್ ಹಾಗೂ ಆ್ಯಸಿಡ್ ಹಾಕಿಸಿ ಸ್ವಚ್ಛಗೊಳಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ವಿಷಯ ತಿಳಿದ ಮಕ್ಕಳ ಪೊಷಕರು ಶಾಲೆ ಮುಂದೆ ಜಮಾಯಿಸಿ ಶಿಕ್ಷಕರ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಬಿಇಓ ಆಂಜನಪ್ಪ ಅವರು ಸ್ಥಳಕ್ಕಾಗಮಿಸಿ ಪ್ರತಿಭಟನಾಕರರ ಮನವೊಲಿಸಿ ನಂತರ ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್‍ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಶಾಲಾ ಮುಖ್ಯ ಶಿಕ್ಷಕಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.