ರಾಜ್ಯದಲ್ಲಿ ಇಂದು 106 ಜನರಿಗೆ ಕೊರೋನಾ ಪಾಸಿಟಿವ್; ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆ!
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ ಒಂದೇ ದಿನ 106 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ ಒಂದೇ ದಿನ 106 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 106 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,089,462ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 7.35ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.
ಬೆಂಗಳೂರಿನಲ್ಲಿಯೇ ಬರೊಬ್ಬರಿ 95 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 329ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


