ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಸಿದ್ಧತೆ ಪರಿಶೀಲಿಸಿದ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್!
ಕರ್ನಾಟಕದಲ್ಲಿ ಶನಿವಾರ 104 ಕೋವಿಡ್-ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಆದರೆ, ಯಾವುದೇ ಸಾವುಗಳು ವರದಿಯಾಗಿಲ್ಲ.

ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ 104 ಕೋವಿಡ್-ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಆದರೆ, ಯಾವುದೇ ಸಾವುಗಳು ವರದಿಯಾಗಿಲ್ಲ. ರಾಜ್ಯ ಸರ್ಕಾರ ಶನಿವಾರದಿಂದ ದಿನಕ್ಕೆ 5,000 ಪರೀಕ್ಷೆ ನಡೆಸುವ ಗುರಿಯನ್ನು ಹೊಂದಿದ್ದರೂ, ದಿನದಲ್ಲಿ 1,752 ಪರೀಕ್ಷೆಗಳನ್ನು ಮಾತ್ರ ನಿರ್ವಹಿಸಿದೆ. ಒಟ್ಟು ಪಾಸಿಟಿವ್ ದರ 5.93 ರಷ್ಟಿತ್ತು.
ಇದೇ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಸಿದ್ಧತೆಯನ್ನು ಪರಿಶೀಲಿಸಿದರು. ಅವರು ಮೀಸಲಾದ ಕೋವಿಡ್ ವಾರ್ಡ್ಗೆ ಭೇಟಿ ನೀಡಿ, ಹಾಸಿಗೆಗಳ ಲಭ್ಯತೆಯ ಬಗ್ಗೆ ವಿಚಾರಿಸಿದರು. ಮತ್ತೊಂದೆಡೆ ಮೈಸೂರಿನಲ್ಲಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಯಾವುದೇ ಕೋವಿಡ್ ನಿರ್ಬಂಧಗಳಿಲ್ಲ ಎಂದು ಪುನರುಚ್ಚರಿಸಿದರು.
ಜನರು ಭಯಭೀತರಾಗಬೇಡಿ ಆದರೆ ಆರೋಗ್ಯ ಮಾರ್ಗಸೂಚಿಗಳನ್ನು ಅನುಸರಿಸಿ ಎಂದು ಅವರು ಮನವಿ ಮಾಡಿದರು. ಸಾಮಾನ್ಯ ಜೀವನಕ್ಕೆ ಯಾವುದೇ ನಿರ್ಬಂಧಗಳಿಲ್ಲ ಎಂದು ತಿಳಿಸಿದರು.
ಪಾಸಿಟಿವ್ ಪ್ರಕರಣಗಳು: 104; ಸಕ್ರಿಯ ಪ್ರಕರಣಗಳು -271 (ICU ನಲ್ಲಿ 6, ಸಾಮಾನ್ಯ ಹಾಸಿಗೆಯಲ್ಲಿ 7, 258 ಮನೆಯಲ್ಲಿ ಪ್ರತ್ಯೇಕತೆ);ಪರೀಕ್ಷೆ -1,752; ಸಾವುಗಳು -0, ಪಾಸಿಟಿವ್ ದರ -5.93
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


