ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ: ಸಿಬ್ಬಂದಿಗೆ ಬೆದರಿಕೆ; ಪುನೀತ್ ಕೆರೆಹಳ್ಳಿ ವಿರುದ್ಧ FIR
ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕ್ರಿಸ್ಮಸ್ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ನೀಡಿರುವ ದೂರಿನ ಅನ್ವಯ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲಗಳ ಪ್ರಕಾರ ಡಿಸೆಂಬರ್ 23 ರಂದು ಮಧ್ಯಾಹ್ನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾ ಬಳಿ ತೆರಳಿದ್ದ ಪುನೀತ್ ಕೆರೆಹಳ್ಳಿ ಮತ್ತವರ ಬೆಂಬಲಿಗರು, ಮಾಲ್ ಒಳಗೆ ಕ್ರಿಸ್ಮಸ್ ಟ್ರೀ ಪ್ರದರ್ಶನ ಹಾಗೂ ಅದಕ್ಕೆ 200 ರೂ. ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿದ್ದಾರೆ. ಈ ವೇಳೆ ಮಾಲ್‌ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಡಿಸೆಂಬರ್ 25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸದ್ಯ ಮಾಲ್‌ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ನೀಡಿರುವ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರ ವಿರುದ್ಧ ಕೊಡಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


