ದತ್ತ ಜಯಂತಿ ಶೋಭಾ ಯಾತ್ರೆ: ಕಾರ್ಯಕರ್ತರೊಂದಿಗೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಜ್ಜೆ! ವಿಡಿಯೋ
ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.
ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಸ್ತೆಯುದ್ಧಕ್ಕೂ ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆ ಮೊಳಗಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಇಂದು ಚಿಕ್ಕಮಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಮಹಿಳೆಯರಿಂದ ಅನಸೂಯ ಜಯಂತಿ ಆಚರಣೆ ಮಾಡುವುದರ ಮೂಲಕ ಸಂಕೀರ್ತನೆ ಯಾತ್ರೆ ನಡೆಯಲಿದೆ. ನಾಳೆ ನಗರದಲ್ಲಿ ಬೃಹತ್ ಶೋಭಾಯತ್ರೆ ನಡೆಯಲಿದೆ. ಈ ಶೋಭಾಯಾತ್ರೆಯಲ್ಲಿ 25,000 ಕ್ಕೂ ಅಧಿಕ ಜನ ಮಾಲಾಧಾರಿಗಳು ಭಾಗವಹಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


