ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!
ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ.

ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ.
ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.
ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ನಿತ್ಯಾ ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿದ್ದು,ನಿತ್ಯಾ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


