ಅನ್ನ ಕೊಡುವ ನೆಲದ ನಿಯಮ ಪಾಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿಕೊಂಡಿರುವ ಅವರು, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಂದೇಶ ರವಾನಿಸಿದ್ದಾರೆ.
ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


