ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಸಿದ್ದರಾಮಯ್ಯ ಹೇಳಿಕೆ ಹಿಂದೆ ರಾಹುಲ್ ಗಾಂಧಿ ಪ್ರಭಾವವಿದೆ: ಪ್ರಲ್ಹಾದ ಜೋಶಿ
ಹಿಜಾಬ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಖಂಡನೀಯ. ಯಾರೂ ಅದನ್ನು ನಿಷೇಧಿಸಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ: ಹಿಜಾಬ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಖಂಡನೀಯ. ಯಾರೂ ಅದನ್ನು ನಿಷೇಧಿಸಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ಹೇಳಿದ್ದಾರೆ.
'ಸಿದ್ದರಾಮಯ್ಯ ಅವರು ತಮ್ಮ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಹಿಂದಿರುಗಿದಾಗ ಆಗಾಗ್ಗೆ ಇಂತಹ ಸುಳ್ಳುಗಳನ್ನು ಹೇಳುತ್ತಾರೆ. ರಾಹುಲ್ ಗಾಂಧಿ ಪ್ರಭಾವವೇ ಸಿಎಂ ಈ ರೀತಿ ಮಾತನಾಡುವಂತೆ ಮಾಡಿದೆ' ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
'ಸಿಎಂ ಸಿದ್ದರಾಮಯ್ಯ ಅವರು ಸಮಸ್ಯೆಯ ವಾಸ್ತವಾಂಶವನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ, ಅವರು ಪ್ರತಿಕ್ರಿಯಿಸಬಾರದು ಅಥವಾ ಹೇಳಿಕೆ ನೀಡಬಾರದು. ಸಿದ್ದರಾಮಯ್ಯ ಸಿಎಂ ಆಗಲು ಅನರ್ಹರು' ಎಂದು ದೂರಿದರು.
ಸಿದ್ದರಾಮಯ್ಯ ಅವರು ಅಸಂಬದ್ಧ ಹೇಳಿಕೆ ನೀಡುವ ಮೂಲಕ ಸಮುದಾಯಗಳ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ. 'ಶಿಕ್ಷಣ ಸಂಸ್ಥೆಗಳಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂಬುದು ಸತ್ಯ. ಅವರು ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದರೆ, ಅವರು ಮತಗಳ ಕ್ರೋಢೀಕರಿಸಲು ಸಮುದಾಯಗಳ ನಡುವೆ ಘರ್ಷಣೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಸಚಿವರು ಆರೋಪಿಸಿದರು.
'ಕೆಲವು ವಿದ್ಯಾರ್ಥಿನಿಯರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ದಿದ್ದಾರೆ ಮತ್ತು ನ್ಯಾಯಾಲಯದ ನಿರ್ಧಾರವನ್ನು ಅನುಸರಿಸಬೇಕು. ಜನರು ಬುದ್ಧಿವಂತರು ಮತ್ತು ಅವರಿಗೆ ದೇಶದಲ್ಲಿ ಏನು ನಡೆಯುತ್ತಿದೆ ಎಂದು ತಿಳಿದಿದೆ. ಅವರು ತಕ್ಕ ಪಾಠ ಕಲಿಸುತ್ತಾರೆ' ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


