ಕೊಚ್ಚಾಡಿಯನ್ ವಂಚನೆ ಪ್ರಕರಣ: ರಜನಿಕಾಂತ್ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್, ಜಾಮೀನು ಮಂಜೂರು
ಕೊಚಾಡಿಯನ್ ಚಿತ್ರದ ವಿತರಕರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರು ಮಂಗಳವಾರ ಬೆಂಗಳೂರಿನ ಕೋರ್ಟ್ ಗೆ ಖುದ್ದು ಹಾಜರಾಗಿ ಜಾಮೀನು...

ಬೆಂಗಳೂರು: ಕೊಚಾಡಿಯನ್ ಚಿತ್ರದ ವಿತರಕರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರು ಮಂಗಳವಾರ ಬೆಂಗಳೂರಿನ ಕೋರ್ಟ್ ಗೆ ಖುದ್ದು ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.
ವಂಚನೆ ಪ್ರಕರಣ ಸಂಬಂಧ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿಗೆ ಹಾಜರಾಗಬೇಕು ಎಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಲತಾ ರಜಿನಿಕಾಂತ್ ಅವರಿಗೆ ಸೂಚಿಸಿತ್ತು. ಅದರಂತೆ ಇಂದು ಖುದ್ದಾಗಿ ಲತಾ ಅವರು ಬೆಂಗಳೂರಿನ ಕೋರ್ಟಿಗೆ ಹಾಜರಾಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ಆರೋಪಿ ಲತಾ ಅವರಿಗೆ ಜಾಮೀನು ಮಂಜೂರು ಮಾಡಿದೆ. ಎರಡು ವೈಯಕ್ತಿಕ ಬಾಂಡ್ ನೀಡುವಂತೆ ಲತಾ ಅವರಿಗೆ ಕೋರ್ಟ್ ಸೂಚನೆ ನೀಡಿದೆ.
ಆ್ಯಡ್ ಬ್ಯೂರೋ ಏಜೆನ್ಸಿ ಲತಾ ವಿರುದ್ಧ ಕೇಸ್ ದಾಖಲಿಸಿದ್ದು, ಕೊಚಾಡಿಯನ್ ಚಿತ್ರಕ್ಕಾಗಿ 6.2 ಕೋಟಿ ರೂ. ಸಾಲ ಪಡೆದು ಹಿಂದಿರುಗಿಸಿಲ್ಲ ಮತ್ತು ನಕಲಿ ಲೆಟರ್ ಹೆಡ್ ನೀಡಿದ್ದಾರೆ ಎಂದು ಅಬಿರ್ ಚಂದ್ ನವಾಹರ್ ಎಂಬುವವರು ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


