ರಾಜ್ಯ

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ
ಆಹ್ವಾನ ಪತ್ರ ಸ್ವೀಕರಿಸಿದ ಹೆಚ್'ಡಿ.ಕುಮಾರಸ್ವಾಮಿ.
Published On :

ಬೆಂಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.

ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬರಬೇಕು ಎಂದು ಮಾಜಿ ಸಿಎಂ ಹೆಚ್‌ಡಿಕೆಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನ ನೀಡಿದೆ.

ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಆಹ್ವಾನ ಪತ್ರಿಕೆ ನೀಡಿದ್ದಾರೆ.

ಆಹ್ವಾನ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿಗಳು, ಕುಟುಂಬ ಸಮೇತ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ರಾಮ್ ಲಾಲ್ ಅವರಿಗೆ ತಿಳಿಸಿದರು. ಅಲ್ಲದೆ, ರಾಮಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ಟ್ರಸ್ಟ್ ನ ಪ್ರಮುಖರು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.